Muhammad Hamza Battur

Ayah by Ayah

Tags

Download Links

Muhammad Hamza Battur translation for Surah Al-Hadid — Ayah 28

57:28
يَٰٓأَيُّهَا ٱلَّذِينَ ءَامَنُواْ ٱتَّقُواْ ٱللَّهَ وَءَامِنُواْ بِرَسُولِهِۦ يُؤۡتِكُمۡ كِفۡلَيۡنِ مِن رَّحۡمَتِهِۦ وَيَجۡعَل لَّكُمۡ نُورٗا تَمۡشُونَ بِهِۦ وَيَغۡفِرۡ لَكُمۡۚ وَٱللَّهُ غَفُورٞ رَّحِيمٞ ٢٨
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ಅಲ್ಲಾಹು ನಿಮಗೆ ಅವನ ದಯೆಯ ಎರಡು ಪಾಲನ್ನು ನೀಡುವನು.1 ಅವನು ನಿಮಗೆ ಬೆಳಕನ್ನು ನೀಡುವನು. ಅದರ ಮೂಲಕ ನಿಮಗೆ (ಸರಿಯಾದ ಮಾರ್ಗದಲ್ಲಿ) ನಡೆಯಬಹುದು. ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Footnotes
  • [1] ಈ ಎರಡು ಪಾಲು ಸಿಗುವುದು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆಗಮನಕ್ಕೆ ಮೊದಲು ಬೇರೊಬ್ಬ ಪ್ರವಾದಿಯಲ್ಲಿ ಮತ್ತು ನಂತರ ಪ್ರವಾದಿಯವರಲ್ಲಿ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿಶ್ವಾಸವಿಟ್ಟ ಸತ್ಯವಿಶ್ವಾಸಿಗಳಿಗಾಗಿದೆ.