Muhammad Hamza Battur

Ayah by Ayah

Tags

Download Links

A translation of every ayah of the Quran in Kannada.

Muhammad Hamza Battur translation for Surah As-Saf — Ayah 6

61:6
وَإِذۡ قَالَ عِيسَى ٱبۡنُ مَرۡيَمَ يَٰبَنِيٓ إِسۡرَٰٓءِيلَ إِنِّي رَسُولُ ٱللَّهِ إِلَيۡكُم مُّصَدِّقٗا لِّمَا بَيۡنَ يَدَيَّ مِنَ ٱلتَّوۡرَىٰةِ وَمُبَشِّرَۢا بِرَسُولٖ يَأۡتِي مِنۢ بَعۡدِي ٱسۡمُهُۥٓ أَحۡمَدُۖ فَلَمَّا جَآءَهُم بِٱلۡبَيِّنَٰتِ قَالُواْ هَٰذَا سِحۡرٞ مُّبِينٞ ٦
ಮರ್ಯಮರ ಮಗ ಈಸಾ ಹೇಳಿದ ಸಂದರ್ಭ: “ಓ ಇಸ್ರಾಯೇಲ್ ಮಕ್ಕಳೇ! ನಾನು ನನಗಿಂತ ಮೊದಲು ಅವತೀರ್ಣವಾದ ತೌರಾತನ್ನು ದೃಢೀಕರಿಸಲು ಮತ್ತು ನನ್ನ ನಂತರ ಬರುವ ಅಹ್ಮದ್1 ಎಂಬ ಹೆಸರಿನ ಒಬ್ಬ ಸಂದೇಶವಾಹಕರ ಬಗ್ಗೆ ನಿಮಗೆ ಸುವಾರ್ತೆ ತಿಳಿಸಲು ನಿಮ್ಮ ಬಳಿಗೆ ಕಳುಹಿಸಲಾಗಿರುವ ಅಲ್ಲಾಹನ ಸಂದೇಶವಾಹಕನಾಗಿದ್ದೇನೆ.” ಆದರೆ ಅವರು (ಈಸಾ) ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.”
Footnotes
  • [1] ಅಹ್ಮದ್ ಪ್ರವಾದಿ ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರ ಇನ್ನೊಂದು ಹೆಸರು.